ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹಳಿತಪ್ಪಿದ ರೀ ರೈಲ್‌: ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ತಪಾಸಣೆಯಲ್ಲಿ ಬಳಸಲಾದ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ರೈಲ್-ಕಮ್-ರೋಡ್ ವಾಹನದ ಚಕ್ರಗಳಲ್ಲಿ ಒಂದು ಹಳಿತಪ್ಪಿದೆ
ತಪಾಸಣೆಯಲ್ಲಿ ಬಳಸಲಾದ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ರೈಲ್-ಕಮ್-ರೋಡ್ ವಾಹನದ ಚಕ್ರಗಳಲ್ಲಿ ಒಂದು ಹಳಿತಪ್ಪಿದೆ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ.

ಇದರ ಪರಿಣಾಮ ಪ್ರಯಾಣಿಕರಿಗೆ ಭಾರೀ ಸಮಸ್ಯೆಯಾಗುತ್ತಿದ್ದು, ಬೆಳಿಗ್ಗೆಯೇ ಕೆಲಸಕ್ಕೆ ತೆರಳುವವರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ನಮ್ಮ ಮೆಟ್ರೋ, ನಮ್ಮ ಮೆಟ್ರೋ ಪ್ರಯಾಣಿಕರು ದಯವಿಟ್ಟು ಗಮನಿಸಿ, ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ಹಸಿರು ಮಾರ್ಗದಲ್ಲಿ ರೈಲು ಸೇವೆಗಳು ಲಭ್ಯವಿರುತ್ತವೆ. ಅಡಚಣೆಗಾಗಿ ವಿಷಾದಿಸುತ್ತೇವೆಂದು ಹೇಳಿದೆ.

ಇದೀಗ ರೀ ರೈಲ್ ವಾಹನವನ್ನು‌ ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ಸಮಸ್ಯೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್‌ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com