ಬೆಂಗಳೂರು: ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದ್ದು, ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ( ಜಿ.ಎಸ್.ಟಿ ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಸಂಗ್ರಹಕ್ಕಿಂತ ಈಬಾರಿ ಶೇ. 20 ರಷ್ಟು ಪ್ರಗತಿ ಕಂಡಿದೆ. ಸೆಪ್ಟೆಂಬರ್ ನಲ್ಲಿ ರೂ. 11,693 ಕೋಟಿ ಜಿಎಸ್‌ಟಿ ಸಂಗ್ರಹವಾಗಿದ್ದು, ಇದು ರಾಜ್ಯದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿ ಎಂದು ಭಾವಿಸಿದ್ದೇನೆ ಎಂದಿದ್ದಾರೆ.
ಬಡವರ ಜೀಬಿಗೆ ಹಣ ಹಾಕಿದರೆ ಅವರಲ್ಲಿ ಕೊಳ್ಳುವ ಸಾಮರ್ಥ್ಯ ಬರುತ್ತದೆ, ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ ' ಎಂದು ಈ ಹಿಂದೆ ಹಲವು ಬಾರಿ ಹೇಳಿದ್ದೆ,'ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹ ನನ್ನ ಮಾತನ್ನು ಸಾಬೀತು ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Advertisement