ಬಿಡಿಎ ಆಯುಕ್ತರಾಗಿ ಎನ್. ಜಯರಾಮ್ ನೇಮಕ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಎನ್. ಜಯರಾಮ್
ಎನ್. ಜಯರಾಮ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಜಯರಾಮ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ. ಬಿಡಿಎ ಆಯುಕ್ತರಾಗಿದ್ದ ಕುಮಾರ ನಾಯಕ್‌ ಅವರು ನಿವೃತ್ತರಾದ ಕಾರಣ ತೆರವಾದ ಹುದ್ದೆಗೆ ಜಯರಾಮ್‌ ಅವರನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

2004ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಜಯರಾಮ್‌ ಅವರು, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಮೈಸೂರಿನಲ್ಲಿ ಮುಡಾ ಆಯುಕ್ತರಾಗಿ, ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಇತರ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು ಮೈಸೂರು ಮೂಲದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರ ಅಳಿಯ ಆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com