ಕೇಂದ್ರದ ಮೂರು ತಂಡಗಳು ಗುರುವಾರ ರಾಜ್ಯಕ್ಕೆ ಭೇಟಿ; 12 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ

ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ.

ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.

ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಅವಲೋಕಿಸಲಿವೆ ಎನ್ನಲಾಗಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದೆ.

ಬರದಿಂದ ರಾಜ್ಯಕ್ಕೆ 30,432 ಕೋಟಿ ರೂ. ನಷ್ಟವಾಗಿದೆ. 39,039 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಬೆಳೆ 2,655 ಕೋಟಿ ರೂ. ನಷ್ಟವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.

ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಒಟ್ಟು 195 ತಾಲ್ಲೂಕುಗಳ ಪೈಕಿ 161 ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 34 ಸಾಮಾನ್ಯ ಮತ್ತು 40 ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದಿದ್ದಾರೆ.

ಬರ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ 6,000 ಕೋಟಿ ರೂಪಾಯಿ ಪ್ಯಾಕೇಜ್ ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com