ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕವಿನ್ ಬಂಧಿತ ಹೆಡ್ ಕಾನ್‌ಸ್ಟೇಬಲ್ ಆಗಿದ್ದಾರೆ. ವಾಹನ ಬಿಡುಗಡೆ ಮಾಡಲು ಶಿವಕುಮಾರ್ ಎಂಬುವವರ ಬಳಿ ಕವಿನ್ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಿವಕುಮಾರ್​ ಲೋಕಾಯಕ್ತಕ್ಕೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಹೆಡ್ ಕಾನ್‌ಸ್ಟೇಬಲ್ ಕವಿನ್ 20 ಸಾವಿರ ರೂ. ಲಂಚ ಪಡೆಯುವಾಗ ವೇಳೆ ರೆಡ್​ ಹ್ಯಾಂಡ್​ ಆಗಿ ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com