ಕರ್ನಾಟದಲ್ಲಿ ಹೂಡಿಕೆ ಮಾಡಿ: ಅಮೆರಿಕಾ ಉದ್ಯಮಿಗಳ ಮನವೊಲಿಸಿದ ರಾಜ್ಯ ಸರ್ಕಾರ

ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಅವರು ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಭೆ ನಡೆಸಿದ್ದು, ನಾವೀನ್ಯತೆ ಮತ್ತು ಸಹಯೋಗದ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು.
ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಮಾತುಕತೆ ನಡೆಸುತ್ತಿರುವುದು.
ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಮಾತುಕತೆ ನಡೆಸುತ್ತಿರುವುದು.

ಬೆಂಗಳೂರು: ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಅವರು ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಭೆ ನಡೆಸಿದ್ದು, ನಾವೀನ್ಯತೆ ಮತ್ತು ಸಹಯೋಗದ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು.

ಸಚಿವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಪ್ರಮುಖ ತಂತ್ರಜ್ಞಾನ ಉದ್ದಿಮೆಗಳಾದ ಅಪ್ಲೈಡ್ ಮೆಟೀರಿಯಲ್ಸ್, ಜುನಿಪರ್ ಮತ್ತು ವೆಸ್ಟರ್ನ್ ಡಿಜಿಟಲ್‌ನೊಂದಿಗೆ ಸಂವಾದ ನಡೆಸಿದರು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆ, ಹಾರ್ಡ್‌ವೇರ್ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮುಂತಾದ ವಿಷಯಗಳನ್ನು ಕುರಿತಂತೆ ಚರ್ಚಿಸಿದರಲ್ಲದೆ, ಬಂಡವಾಳ ಹೂಡಿಕೆ ವ್ಯವಹಾರವನ್ನು ಸುಲಭಗೊಳಿಸುವ ಕುರಿತಂತೆ ವಿಚಾರ ವಿನಿಮಯ ಮಾಡಿಕೊಂಡರು.

ಸಭೆ ಬಳಿಕ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, “ಕರ್ನಾಟಕವು ಐಟಿ/ಬಿಟಿ ಹಬ್ ಆಗಿ ಕಂಪನಿಗಳಿಗೆ ಅಪಾರ ಬೆಳವಣಿಗೆಯ ಅವಕಾಶಗಳನ್ನು ನೀಡುತ್ತದೆ. ನಾವು ಅಮೆರಿಕದಲ್ಲಿ ಉದ್ಯಮದ ಪ್ರಮುಖರೊಂದಿಗೆ ಫಲಪ್ರದ ಸಂವಾದಗಳನ್ನು ನಡೆಸಿದ್ದೇವೆ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವೀಕರಿಸಿದ್ದೇವೆ ಎಂದು ನನಗೆ ಸಂತೋಷವಾಗಿದೆ. ನಮ್ಮ ಸರ್ಕಾರವು ಉತ್ತಮ ಮೂಲಸೌಕರ್ಯಗಳನ್ನು ಒದಗಿಸಲು ಬದ್ಧವಾಗಿದೆ, ಅನುಕೂಲಕರ ನೀತಿಗಳ ಮೂಲಕ ಸುಲಭವಾಗಿ ವ್ಯಾಪಾರ ವಹಿವಾಟು ಮಾಡುವುದನ್ನು ಖಾತ್ರಿಪಡಿಸುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com