ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸೆ.30 ರಂದು ಆಯೋಜಿಸಿದ್ದ ಹಿಂದೂ ಮನಗಣಪತಿ ಮೆರವಣಿಗೆ ವೇಳೆ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಲ್ಲಿನ ಪೊಲೀಸರು ಹಿಂದೂ ಪರ ಕಾರ್ಯಕರ್ತನನ್ನು ಬಂಧಿಸಿದ್ದಾರೆ.

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.

ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಎದೆಯ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾರೆ. ಈತನ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪಿಎಸ್‌ಐ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com