ಮಹಾರಾಣಿ ಕಾಲೇಜು ಆವರಣದಲ್ಲಿ ಕಾರು ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನೀಯರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನೀಯರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಶನಿವಾರ ತಿಳಿದುಬಂದಿದೆ.

ಮಹಾರಾಣಿ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9.30ರ ಸುಮಾರಿಗೆ ನಡೆದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಾಲೇಜಿನ ಇಂಗ್ಲೀಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಇಬ್ಬರು ವಿದ್ಯಾರ್ಥಿನೀಯರು ಮತ್ತು ಮ್ಯೂಸಿಕ್ ಟೀಚರ್ ಗೆ ಡಿಕ್ಕಿ ಹೊಡೆದಿದ್ದಾರೆನ್ನಲಾಗಿದೆ.

ಘಟನೆಯಲ್ಲಿ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮ್ಯೂಸಿಕ್ ಟೀಚರ್ ಜ್ಯೋತಿ ಅವರಿಗೂ ಗಾಯಗಳಾಗಿದೆ.

ಪ್ರೊ.ನಾಗರಾಜ್ ಅವರು ಓವರ್ ಸ್ಪೀಡ್ ನಿಂದ ಕಾರು ಚಲಾಯಿಸಿದ್ದು ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರೊಫೆಸರ್ ನಾಗರಾಜ್ ಅವರು ಕಾಲೇಜಿಗೆ ಕಾರು ಚಲಾಯಿಸಿಕೊಂಡು ಬಂದಿದ್ದು, ಕಾರು ಒಳ ಆವರಣದಲ್ಲಿ ಬರುತ್ತಿದ್ದಂತೆ ಇಬ್ಬರು ವಿದ್ಯಾರ್ಥಿನಿಯರು ಕಾರಿಗೆ ಅಡ್ಡ ಬಂದಿದ್ದಾರೆ. ಈ ವೇಳೆ ಪ್ರೊಫೆಸರ್ ಅವರು ಕೊಂಚ ಗಾಬರಿಯಾಗಿದ್ದು, ಕಾರಿನ ಬ್ರೇಕ್ ಒತ್ತುವ ಬದಲಾಗಿ, ಆ್ಯಕ್ಸಿಲರೇಟರ್ ಒತ್ತಿದ್ದಾರೆ. ಪರಿಣಾಮ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com