ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್, ಸಿದ್ಧತೆ ಆರಂಭ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ...
ಮೈಸೂರು ಡಿಸಿ ಕೆವಿ ರಾಜೇಂದ್ರ ಮತ್ತು ಐಎಎಫ್ ಗ್ರೂಪ್ ಕ್ಯಾಪ್ಟನ್ ಡಿಕೆ ಓಜಾ ಅವರು ಶುಕ್ರವಾರ ಮೈಸೂರಿನಲ್ಲಿ ಈ ಬಾರಿಯ ದಸರಾ ವೈಮಾನಿಕ ಪ್ರದರ್ಶನದ ಸ್ಥಳವಾದ ಬನ್ನಿಮಂಟಪದ ಕ್ರೀಡಾಂಗಣವನ್ನು ಪರಿಶೀಲಿಸಿದರು.
ಮೈಸೂರು ಡಿಸಿ ಕೆವಿ ರಾಜೇಂದ್ರ ಮತ್ತು ಐಎಎಫ್ ಗ್ರೂಪ್ ಕ್ಯಾಪ್ಟನ್ ಡಿಕೆ ಓಜಾ ಅವರು ಶುಕ್ರವಾರ ಮೈಸೂರಿನಲ್ಲಿ ಈ ಬಾರಿಯ ದಸರಾ ವೈಮಾನಿಕ ಪ್ರದರ್ಶನದ ಸ್ಥಳವಾದ ಬನ್ನಿಮಂಟಪದ ಕ್ರೀಡಾಂಗಣವನ್ನು ಪರಿಶೀಲಿಸಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ಮೂರು ವರ್ಷಗಳ ಬಳಿಕ ಏರ್ ಶೋ ನಡೆಯುತ್ತಿದ್ದು, ಈ ಬಾರಿಯ ದಸರಾ ಆಚರಣೆ ಮೈಸೂರಿಗೆ ಭಾರಿ ಜನರನ್ನು ಆಕರ್ಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಈ ಬಗ್ಗೆ ಮನವಿ ಮಾಡಿದ್ದರು ಎಂದು ಹೇಳಲಾಗುತ್ತಿತ್ತು.

ಮೈಸೂರು ದಸರಾದಲ್ಲಿ ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ಜಂಬೂ ಸವಾರಿ ಪ್ರಮುಖ ಆಕರ್ಷಣೆಯಾಗಿದ್ದರೂ, ಉತ್ಸವದ ಸಮಯದಲ್ಲಿ ದೀಪಾಲಂಕಾರ, ಏರ್ ಶೋ, ಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಯುವ ದಸರಾದಂತಹ ಕಾರ್ಯಕ್ರಮಗಳು ಜನರನ್ನು ಹೆಚ್ಚು ಸೆಳೆಯುತ್ತದೆ.

2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಇಷ್ಟಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com