ಡಿಜಿಪಿ ಅಲೋಕ್ ಮೋಹನ್
ಡಿಜಿಪಿ ಅಲೋಕ್ ಮೋಹನ್

ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮು ದುರಂತದಲ್ಲಿ ಕಾರ್ಮಿಕರ ಸಾವು ಒಂದು ಕೆಟ್ಟ ಘಟನೆ: ಡಿಜಿ-ಐಜಿಪಿ ಅಲೋಕ್ ಮೋಹನ್

ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ ಐಜಿಪಿ ಅಲೋಕ್​ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ ಐಜಿಪಿ ಅಲೋಕ್​ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೊಂದು ಕೆಟ್ಟ ಘಟನೆ. ಬೆಂಕಿ ದುರಂತದಲ್ಲಿ ಗೋಡೌನ್ ನಿಂದ ಹೊರಬರಲಾಗದೇ 14 ಜನರು ಮೃತಪಟ್ಟಿದ್ದಾರೆ. ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

ನಿನ್ನೆ ಕರ್ನಾಟಕ-ತಮಿಳುನಾಡು ಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. 14 ಮೃತದೇಹಗಳು ಪತ್ತೆಯಾಗಿವೆ. ಅಂಗಡಿ ಮಾಲೀಕರು, ಜಮೀನು ಮಾಲೀಕರು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಟಾಕಿ ಅಂಗಡಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಗೋದಾಮಿನ ಮಾಲೀಕರ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದರು.

ಪಟಾಕಿ ಯಾರು ಕಳಿಸಿದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಪಟಾಕಿ ಆರ್ಡರ್ ಬಂದಮೇಲೆ ಇಲ್ಲಿನ ದಾಖಲೆ ಪಡೆದು ಸಾಗಿಸಬೇಕು. ಜೊತೆಗೆ ಪಟಾಕಿ ಸಾಗಾಣಿಕೆ ವೇಳೆಯೂ ಎಸ್​​ಒಪಿ ಪಾಲಿಸಬೇಕಾಗುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪಟಾಕಿಗಳನ್ನು ತಮಿಳುನಾಡಿನ ಧರ್ಮಪುರಿಯಿಂದ ತಂದಿರುವ ಮಾಹಿತಿ ಇದೆ. ದುರಂತ ಬಗ್ಗೆ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಲಾಗುತ್ತದೆ. ಗಾಯಾಳುಗಳಿಂದಲೇ ದೂರು ಪಡೆಯಲಾಗಿದೆ. ನರಹತ್ಯೆ ಎಂಬ ಆರೋಪದ ಮೇಲೆ ದೂರು ತೆಗೆದುಕೊಳ್ಳಲಾಗಿದೆ. ಯಾವ್ಯಾವ ಇಲಾಖೆಯಿಂದ ಲೋಪ ಆಗಿದೆ ಆ ಬಗ್ಗೆಯೂ ತನಿಖೆ ನಡೆಯುತ್ತದೆ. ಯಾರೇ ಇರಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮೃತಪಟ್ಟವರು ತಮಿಳು ನಾಡು ಮೂಲದ ಕಾರ್ಮಿಕರಾಗಿರುವುದರಿಂದ ಅತ್ತಿಬೆಲೆಯಲ್ಲಿರುವ ಪಟಾಕಿ ಗೋಡೌನ್​ ಅಗ್ನಿ ದುರಂತ ಸ್ಥಳಕ್ಕೆ ತಮಿಳುನಾಡು ಸಚಿವರು, ಶಾಸಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮಿಳುನಾಡು ಆರೋಗ್ಯ ಸಚಿವ ಮಾ.ಸುಬ್ರಮಣಿಯನ್, ಆಹಾರ ಸಚಿವ ಸಕ್ರಪಾಣಿ ಭೇಟಿ ನೀಡಿದ್ದು, ಆಸ್ಪತ್ರೆಗೆ ತಮಿಳುನಾಡಿನ ಅರೂರು ಶಾಸಕ ಸಂಪತ್ ಕುಮಾರ್,  ಶಾಸಕ ರಾಮಚಂದ್ರ ಭೇಟಿ ನೀಡಿದ್ದಾರೆ. ಹೊಸೂರು ಶಾಸಕ ವೈ ಪ್ರಕಾಶ್ ಕೂಡ ಭೇಟಿ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com