ರಾಜ್ಯಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ- ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ತಿಳಿಸಿದ್ದಾರೆ. 
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು "ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು  ಸೂಚನೆ ನೀಡಿರುವುದಾಗಿ ಹೇಳಿದರು.

ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರ ತನಿಖೆ ನಡೆಸಲಾಗುವುದು ಎಂದರು.

ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ ಅಯಾಮಕರ ಸಾವು ಸಂಭವಿಸದಂತೆ ಮುನ್ನೆಚರಿಕೆವಹಿಸುತ್ತೇವೆ. ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. 

ಸೋಮವಾರ ಬ್ರಾಂಡ್ ಬೆಂಗಳೂರು ಸಭೆ: ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು,‌ ಅವುಗಳನ್ನು ಒಂದು ಕಡೆ ಕ್ರೂಡಿಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. Voice of the citizens, should be voice of the karnataka ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ. ಸೋಮವಾರ ಬೆಳಿಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com