ಮೂವರ ಸಜೀವ ದಹನ
ಮೂವರ ಸಜೀವ ದಹನ

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ: ಸಾವಿನ ಸುತ್ತ ಹಲವು ಅನುಮಾನ!

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
Published on

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬದ ಹಿರಿಯರಾದ ಅರ್ಚಕ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಳಸುರಳಿ ಹೊಸನಗರ ಮಾರ್ಗದಲ್ಲಿ ಕೋಕೋಡ್ ಗ್ರಾಮ ಇದೆ. ಗಾಯಾಳುವನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಿಂದ ಗ್ರಾಮದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಗೊತ್ತಾಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com