ದೆಹಲಿಯಲ್ಲಿ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ

ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ತೆರಳಲಿದ್ದು, ಮುಂಬರುವ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ತೆರಳಲಿದ್ದು, ಮುಂಬರುವ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಪ್ರವಾಸದ ವೇಳೆ ಮುಖ್ಯಮಂತ್ರಿ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಮತ್ತು ಕರ್ನಾಟಕದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿ ಭೇಟಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನನಗೆ ಸಿಡಬ್ಲ್ಯುಸಿ ಸಭೆಯ ಅಜೆಂಡಾ ತಿಳಿದಿಲ್ಲ, ಆದರೆ ನಾವು ಚುನಾವಣೆಯ ಬಗ್ಗೆ ಚರ್ಚಿಸುತ್ತೇವೆ' ಎಂದರು.

'ಮಾಧ್ಯಮಗಳೊಂದಿಗೆ ಹಂಚಿಕೊಂಡ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದ ಪ್ರಕಾರ, ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ಭಾನುವಾರ ರಾತ್ರಿ ದೆಹಲಿಗೆ ತೆರಳಲಿದ್ದಾರೆ. ನಂತರ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ದೆಹಲಿಯಿಂದ ಅವರು ಬೆಂಗಳೂರಿಗೆ ಹಿಂದಿರುಗುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ

ಜಾತಿ ಗಣತಿ, ಪಂಚ ರಾಜ್ಯಗಳ ಚುನಾವಣೆ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳಿಂದ ವಿಪಕ್ಷಗಳ ನಾಯಕರನ್ನು ಗುರಿಯಾಗಿಸುವುದು ಸೇರಿದಂತೆ ದೇಶದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆಯಾಗಲಿದೆ.

ಅಕ್ಟೋಬರ್ 9ರಂದು ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಧ್ಯ ಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸಗಡ ಹಾಗೂ ಮಿಜೋರಾಂ ವಿಧಾನಸಭೆಗಳಿಗೆ ನಡೆಯುವ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಪ್ರಚಾರದ ವೇಳೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ನಾಯಕರಿಗೆ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com