ತಮಿಳುನಾಡಿಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ

ತಮಿಳುನಾಡಿಗೆ ನೀರು ಹರಿಸದಿರುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಮುಂದುವರೆದಿರುವಂತೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಆರ್ ಸಿ ಮತ್ತೆ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ಮತ್ತೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. 
ಕೆಆರ್ ಎಸ್ ಅಣೆಕಟ್ಟು
ಕೆಆರ್ ಎಸ್ ಅಣೆಕಟ್ಟು

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಿರುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಮುಂದುವರೆದಿರುವಂತೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಆರ್ ಸಿ ಮತ್ತೆ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ಪ್ರತಿದಿನ ಮತ್ತೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. 

ನವದೆಹಲಿಯಲ್ಲಿಂದು ನಡೆದ ಸಿಡಬ್ಲ್ಯೂಆರ್ ಸಿಯ 88ನೇ ಸಭೆಯಲ್ಲಿ ಅಕ್ಟೋಬರ್ 16 ರಿಂದ 31ರವರೆಗೆ ಬಿಳಿಗುಂಡ್ಲುವಿನಿಲ್ಲಿ ನಿತ್ಯ 3,000 ಕ್ಯೂಸೆಕ್ಸ್ ನೀರಿನ ಹರಿವನ್ನು ಖಚಿತಪಡಿಸಿಕೊಳ್ಳಬೇಕೆಂದು ನಿರ್ಧರಿಸಲಾಗಿದೆ.

ಸಭೆಯಲ್ಲಿ ರಾಜ್ಯದಲ್ಲಿ ನೀರಿನ ಕೊರತೆಯಾಗಿದ್ದು, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದಿಸಿದರು. ಅಕ್ಟೋಬರ್ 10ರವರೆಗೆ ನಾಲ್ಕು ಜಲಾಶಯಗಳಿಗೆ ಶೇ. 50.891 ರಷ್ಟು ಒಳಹರಿವಿನ ಕೊರತೆಯಾಗಿದ್ದು, ಅನಿಯಂತ್ರಿತ ನೀರಿನ ಹರಿವು ಹೊರತುಪಡಿಸಿ ಬಿಳಿಗುಂಡ್ಲು ತಲುಪಲು ಕರ್ನಾಟಕ ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಆದರೆ, ಮುಂದಿನ 15 ದಿನಗಳವರೆಗೆ ಕರ್ನಾಟಕ 16,000 ಕ್ಯೂಸೆಕ್ಸ್ (20.75 ಟಿಎಂಸಿ) ನೀರು ಬಿಡುಗಡೆ ಮಾಡಬೇಕೆಂದು ತಮಿಳುನಾಡು ವಾದಿಸಿತು. ಅಂತಿಮವಾಗಿ ಕರ್ನಾಟಕ ತನ್ನ ಜಲಾಶಯಗಳಿಂದ ಅಕ್ಟೋಬರ್ 16 ರಿಂದ 31ರವರೆಗೆ ಬಿಳಿಗುಂಡ್ಲುವಿನಲ್ಲಿ 3,000 ಕ್ಯೂಸೆಕ್ಸ್ ನೀರಿನ ಹರಿವನ್ನು ಖಚಿತಪಡಿಸಿಕೊಳ್ಳಬೇಕೆಂದು ಸಿಡಬ್ಲ್ಯೂಆರ್ ಸಿ ತೀರ್ಮಾನ ಮಾಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com