ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.
ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು.
ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು.
Updated on

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.

ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com