ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಪಡಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, 16 ಘೋಷಣೆಗಳಿಗೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಆ ಮೊತ್ತಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕಿದೆ. ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಸರ್ಕಾರದ ವಿವಿಧ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸರ್ಕಾರಕ್ಕೆ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದೆ. ಹಿರಿತನಕ್ಕೆ ಅನುಗುಣವಾಗಿ ಫಲಾನುಭವಿಗಳ ಪಟ್ಟಿ ತಯಾರಿಸಿ ಅನುದಾನದ ಲಭ್ಯತೆಗೆ ಅನುಗುಣವಾಗಿ ಸೌಲಭ್ಯಗಳನ್ನು ವಿತರಿಸಿ.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ. ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು ಹೆಚ್ಚಿಸಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ವಸತಿ ಯೋಜನೆಗಳಿಗೆ ಸಂಪನ್ಮೂಲಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com