ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕೊಲೆ; ಪತಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು  ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜಿವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು  ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜಿವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪರಾಧಿ ಮುತ್ತಪ್ಪ ಬಸಪ್ಪ ಸವದಿ 10,000 ರೂಪಾಯಿ ದಂಡ ಪಾವತಿಸುವಂತೆಯೂ ಸೂಚಿಸಿದೆ.

45ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್, ತೀರ್ಪಿನ ಪ್ರತಿಯನ್ನು ಬೆಂಗಳೂರು ನಗರ ಜಿಲ್ಲೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸಿ, ಮೃತ ಮಹಾದೇವಿಯ ಮಕ್ಕಳ ಪರವಾಗಿ ಸಂತ್ರಸ್ತ ಪರಿಹಾರದಡಿ ಮಕ್ಕಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್ ಕೆ ಎಸ್ ಲತಾ ಅವರ ಪ್ರಕಾರ, ಸವದಿ ಅವರು ತಮ್ಮ ಪತ್ನಿ ಮಹಾದೇವಿ ಮತ್ತು ನಾಲ್ವರು ಮಕ್ಕಳೊಂದಿಗೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದ ಮೆಸ್‌ಗೆ ಹೊಂದಿಕೊಂಡಂತೆ ಸ್ಟೋರ್ ರೂಂನಲ್ಲಿ ವಾಸಿಸುತ್ತಿದ್ದರು.

ಸವದಿ ಯಾವಾಗಲೂ ತನ್ನ ಹೆಂಡತಿಯ ಶೀಲದ ಬಗ್ಗೆ ಅನುಮಾನಿಸುತ್ತಿದ್ದ. ಮೇ 23, 2016 ರ ರಾತ್ರಿ, ದಂಪತಿಗಳು ಕೆಲಸದಿಂದ ಹಿಂದಿರುಗಿದ ನಂತರ ಇದೇ ವಿಚಾರವಾಗಿ ಜಗಳ ಆರಂಭಿಸಿದ್ದರು. ಮಹಾದೇವಿ ಅವರು ಮಲಗಿದ್ದಾಗ ಬೆಳಗಿನ ಜಾವದಲ್ಲಿ ಆಕೆಯ ತಲೆಗೆ ಕಡಪ ಕಲ್ಲಿನಿಂದ (ಚಪಾತಿ ಮಾಡಲು ಬಳಸುವ) ಒಡೆದು ಕೊಲೆ ಮಾಡಿದ್ದಾನೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತನಿಖಾಧಿಕಾರಿ ಯುಡಿ ಕೃಷ್ಣ ಕುಮಾರ್ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com