ದುರಂತ ಸಂಭವಿಸಿದ ಸ್ಥಳ.
ದುರಂತ ಸಂಭವಿಸಿದ ಸ್ಥಳ.

ಅತ್ತಿಬೆಲೆ ಪಟಾಕಿ ಗೋದಾಮು ದುರಂತ ಪ್ರಕರಣ: ಗಾಯಗೊಂಡಿದ್ದ ಯುವಕ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ದಿನೇಶ್ (18) ಎಂದು ಗುರ್ತಿಸಲಾಗಿದೆ. ಮೃತ ದಿನೇಶ್ ಅವರು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಶನಿವಾರದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆಫಲಕಾರಿಯಾಗದೆ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ.

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಬಹಾಗೂ ಗೋದಾಮಿನಲ್ಲಿ  ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದರು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.

ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕ ರಾಮಸ್ವಾಮಿ ರೆಡ್ಡಿ ಸೇರಿದಂತೆ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com