ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸ್ನೇಹಿತನ ಹುಟ್ಟುಹಬ್ಬ ಆಚರಣೆಗಾಗಿ ಪಟಾಕಿ ಖರೀದಿರಲು ಬಾಲಾಜಿ ಟ್ರೇಡರ್ಸ್ ಅಂಗಡಿಗೆ ವೆಂಕಟೇಶ್ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪರಿಣಾಮ ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು. ವೆಂಕಟೇಶ್ ಅವರಿಗೆ ಶೇ 50ರಷ್ಟು ಸುಟ್ಟ ಗಾಯಗಳಾಗಿತ್ತು.

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ  ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತಿಬ್ಬರು ಗಾಯಾಳುಗಳು ಮೃತಪಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿತ್ತು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com