ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ. 
ಆರ್ ಬಿ ತಿಮ್ಮಾಪೂರ ಸಾಂದರ್ಭಿಕ ಚಿತ್ರ
ಆರ್ ಬಿ ತಿಮ್ಮಾಪೂರ ಸಾಂದರ್ಭಿಕ ಚಿತ್ರ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ. 

ಜಲಾಶಯಕ್ಕೆ ಒಳ ಹರಿವು ಬಂದಿರುವುದರಿಂದ ಚಾಲು-ಬಂದ್ ಪದ್ದತಿಯನ್ನು ಪರಿಷ್ಕರಿಸಿ 14 ದಿನ ನೀರು ಚಾಲು ಹಾಗೂ 10 ದಿನದ ಬದಲಿಗೆ 8 ದಿನ ಮಾತ್ರ ಬಂದ್ ಪದ್ದತಿಯನ್ನು ಅನುಸರಿಸಿ ಅಕ್ಟೋಬರ್ 17ರ ಬದಲಿಗೆ ಅಕ್ಟೋಬರ್ 14ನೇ ತಾರೀಖಿನಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ.

ಅಲ್ಲದೇ ಮುಂಗಾರು ಹಂಗಾಮಿಗೆ ನವೆಂಬರ್ 23 ರವರೆಗೂ ನೀರು ಹರಿಸಲು ಕೈಗೊಂಡಿದ್ದ ನಿರ್ಣಯದ ಬದಲಾಗಿ ಡಿಸೆಂಬರ್ 10 ರವರೆಗೂ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ. 

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ನೀರು ಹರಿಸುವುದನ್ನು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ರೈತರ ಹಿತಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಬಾಗಲಕೋಟೆ, ವಿಜಯಪುರ, ಕಲಬುರಗಿ,ಯಾದಗಿರಿ, ರಾಯಚೂರು ಜಿಲ್ಲೆಗಳ ಸುಮಾರು 6 ಲಕ್ಷ ಬೆಕ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com