ಹಾವೇರಿ: ಅತ್ಯಾಚಾರ ಪ್ರಕರಣದಲ್ಲಿ ದಂತವೈದ್ಯನ ಬಂಧನ, ಸಂತ್ರಸ್ತೆ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲು!

ತನ್ನೊಂದಿಗೆ ಕೆಲಸ ಮಾಡುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಂತವೈದ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೇಪ್
ರೇಪ್

ಹಾವೇರಿ: ತನ್ನೊಂದಿಗೆ ಕೆಲಸ ಮಾಡುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಂತವೈದ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, 24 ವರ್ಷದ ನರ್ಸ್ ದಂತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಡಾ. ವಿಜಯ್ ಕುಮಾರ್ ಸಹ ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದು ಇಬ್ಬರು ಪರಸ್ಪರ ಪ್ರೀತಿಸಿ ಸಂಬಂಧ ಬೆಳೆಸಿಕೊಂಡಿದ್ದರು.

ಆರೋಪಿ ವಿಜಯ್ ಕುಮಾರ್ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದು ತನ್ನನ್ನು ಮೂರು ಬಾರಿ ಗರ್ಭಪಾತ ಮಾಡಿದ್ದಾನೆ. ಆದರೆ ನಂತರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಹಿಳೆಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನು ಪೊಲೀಸರಿಗೆ ದೂರು ನೀಡದಂತೆ ಆರೋಪಿ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿ ರಾಜಿ ಸಂಧಾನಕ್ಕೆ ಯತ್ನಿಸಿದ್ದನು ಎಂದು ಆರೋಪಿಸಿದ್ದಾರೆ. ಮಹಿಳೆ ತಾನು ವೈದ್ಯಕೀಯ ಪರೀಕ್ಷೆಗೆ ಸಿದ್ಧವಿದ್ದು, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ರಾಣೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೈದ್ಯರ ದೂರಿನ ಮೇರೆಗೆ ಪೊಲೀಸರು ಮಹಿಳೆ ವಿರುದ್ಧ ಹನಿ ಟ್ರ್ಯಾಪ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆರೋಪಿಸಿದ್ದು ಬಂಧಿಸಿದ್ದು ಇಬ್ಬರ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com