ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನ 

ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಪೊಲೀಸರು ಶನಿವಾರ ಅಬಕಾರಿ ಇಲಾಖೆಯ ಉಪ ಆಯುಕ್ತೆ ಆರ್ ಎಸ್ ಸ್ವಪ್ನಾ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಇತರ ಮೂವರು ಆರೋಪಿಗಳಾದ ಅಶೋಕ ಹೆಚ್.ಎಂ, ಪ್ರಥಮ ವಿಭಾಗದ ಸಹಾಯಕ; ಹರಿಹರ ವಲಯದ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ವಿಭಾಗದ ಸಹಾಯಕಿ ಶೈಲಶ್ರೀ ಎಂಬವವರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಆರೋಪಿಯು ಹರಿಹರದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಸಿಎಲ್-7 ಮದ್ಯದ ಪರವಾನಗಿ ನೀಡಲು ದೂರುದಾರ ಡಿಜಿ ರಘುನಾಥ ಅವರಿಂದ ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. 

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಮೊದಲಿಗೆ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ದೂರುದಾರರಿಂದ 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅಶೋಕ ಹೆಚ್ ಎಂರನ್ನು ಬಂಧಿಸಿದ್ದಾರೆ. ಬಳಿಕ ಸ್ವಪ್ನಾ, ಶೀಲಾ ಹಾಗೂ ಶೈಲಶ್ರೀ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com