ಬಳ್ಳಾರಿಯಲ್ಲಿ ಆಘಾತಕಾರಿ ಘಟನೆ; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಆರೋಪಿಗಳಲ್ಲಿ ಒಬ್ಬಾತ ಆಕೆಯ ಸಹೋದರ ಎಂದು ಹೇಳಿಕೊಂಡು, ಪರೀಕ್ಷೆ ಬರೆಯುತ್ತಿದ್ದಾಗ ಯುವತಿಯನ್ನು ತರಗತಿಯಿಂದ ಹೊರಗೆ ಕರೆದಿದ್ದಾನೆ.

ನಂತರ ಆಕೆಯನ್ನು ಬಲವಂತವಾಗಿ ಆಟೋದಲ್ಲಿ ಹತ್ತಿಸಿಕೊಂಡು ಕೊಪ್ಪಳ ಜಿಲ್ಲೆಯ ಸಣಾಪುರದ ಹೋಟೆಲ್ ಕೊಠಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಮಾದಕ ದ್ರವ್ಯ ಬೆರೆಸಿದ ಬಿಯರ್ ಕುಡಿಯುವಂತೆ ಒತ್ತಾಯಿಸಿದ್ದಾರೆ. ಯುವತಿ ಪ್ರಜ್ಞೆ ತಪ್ಪುತ್ತಿದ್ದಂತೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಪ್ರಜ್ಞೆ ಬಂದ ಮೇಲೆ ಸಂತ್ರಸ್ತೆ ನವೀನ್, ಸಕೀಬ್, ತನು ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳು.

ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com