ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬಾಕಿ ಬಿಲ್‌ಗಳ ಬಿಡುಗಡೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘ

ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಶನಿವಾರ ಭೇಟಿ ಮಾಡಿದರು.  ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು 30 ದಿನಗಳಲ್ಲಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಮುಷ್ಕರ ನಡೆಸಲಿದ್ದಾರೆ ಎಂದು ಒತ್ತಾಯಿಸಿದರು.
Published on

ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಶನಿವಾರ ಭೇಟಿ ಮಾಡಿದರು. 

ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು 30 ದಿನಗಳಲ್ಲಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಮುಷ್ಕರ ನಡೆಸಲಿದ್ದಾರೆ ಎಂದು ಒತ್ತಾಯಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ‘ಗುತ್ತಿಗೆದಾರರ ಬಿಲ್‌ಗಳು 5-6 ತಿಂಗಳಿನಿಂದ ಬಾಕಿ ಉಳಿದಿವೆ. ಈ ಕುರಿತು ಸಿಎಂ ಜತೆ ಸಭೆ ನಡೆಸಿದ್ದು, ಆದಷ್ಟು ಬೇಗ ಬಾಕಿ ಇರುವ ಬಿಲ್‌ಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ' ಎಂದರು. 

ಅಧಿಕಾರಿಗಳು, ಇಂಜಿನಿಯರ್‌ಗಳು, ಬಿಬಿಎಂಪಿ ಆಯುಕ್ತರನ್ನು ಕೇಳಿದ್ದರೂ ಕೂಡ ನಮಗೆ ಬಾಕಿ ಬಿಲ್ ಪಾವತಿಸುತ್ತಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈ ವರ್ಷದೊಳಗೆ ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ನಾವು ಈ ತಿಂಗಳಲ್ಲೇ ಶೇ 50 ರಷ್ಟು ಬಿಲ್ ಕ್ಲಿಯರ್ ಮಾಡುವಂತೆ ಒತ್ತಾಯಿಸಿದ್ದೇವೆ. ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಗುತ್ತಿಗೆದಾರ ಆರ್. ಅಂಬಿಕಾಪತಿ ಎಂಬುವವರ ಮನೆ ಮೇಲೆ ಶುಕ್ರವಾರ ಐಟಿ ದಾಳಿ ನಡೆಸಿದಾಗ 42 ಕೋಟಿ ರೂ. ಹಣ ಪತ್ತೆಯಾಗಿದೆ. ಐಟಿ ಅಧಿಕಾರಿಗಳು 42 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

ಅಂಬಿಕಾಪತಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದು, ಆಗಿನ ಬಿಜೆಪಿ ಸರ್ಕಾರವು ಸಿವಿಲ್ ಗುತ್ತಿಗೆದಾರರಿಂದ ಶೇ 40 ರಷ್ಟು ಕಮಿಷನ್ ಕೇಳುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಪ್ರಮುಖ ಧ್ವನಿಯಾಗಿದ್ದರು.

ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಎಟಿಎಂ ಆಗಿ ಬಳಸುತ್ತಿದೆ ಮತ್ತು ಐದು ರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರಿಂದ ಸಂಗ್ರಹಿಸಿದ ಹಣವನ್ನು ಬಳಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿಎನ್ ಅಶ್ವತ್ಥ್ ನಾರಾಯಣ ಶುಕ್ರವಾರ ಹೇಳಿದ್ದಾರೆ.

'ಐಟಿ ದಾಳಿ ವೇಳೆ ಗುತ್ತಿಗೆದಾರರ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಪಾಪದ ಹಣ ಯಾರ ಹೆಗಲ ಮೇಲಿದೆ? ಈ ಪ್ರಶ್ನೆಗಳಿಗೆ ಉತ್ತರ ಬೇಕು. ಮೊದಲಿನಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್‌ಗೆ ಹಬ್ಬವಾಗಲಿದೆ. ಈಗಲೂ ಅದೇ ನಡೆಯುತ್ತಿದೆ. ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕವನ್ನು ಮೀಸಲಿಡಲಾಗಿದೆ. ಇದು ಕನ್ನಡಿಗರ ಕರ್ಮ' ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com