ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಕೆ.ಸಿ ರಘು
ಕೆ.ಸಿ ರಘು

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

ನಿರರ್ಗಳವಾಗಿ ಮಾತನಾಡ್ತಿದ್ದ ರಘು. ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು  ಅವರು ವಯಸ್ಸಲ್ಲದ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆಹಾರ ವಿಚಾರದಲ್ಲಿ  ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ  ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.


‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7.30 ಕ್ಕೆ ನಿಧನರಾಗಿದ್ದಾರೆ. ಅಂತಿಮ ದರ್ಶನ ಮಾಡಲು ಇಚ್ಛಿಸುವವರು ಈ ಕೆಳಗಿನ ವಿಳಾಸಕ್ಕೆ ಬರಬಹುದು  ಎಂದು ಅವರ ಪತ್ನಿ ಆಶಾ ಮಾಹಿತಿ ನೀಡಿದ್ದಾರೆ.

ಎ-40, 4ನೇ ಮಹಡಿ, ಬ್ರಿಗೇಡ್ ಕಲಾಡಿಯಂ (Brigade Caladium) ದಾಸರಹಳ್ಳಿ ಮೇನ್ ರೋಡ್, ಅಮೃತನಗರ, ದಾಸರಹಳ್ಳಿ, ಬೆಂಗಳೂರು - 560024. Mob- 98800 09140 ' ಎಂದು ಅವರ ಪತ್ನಿ ಆಶಾ ರಘು, ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.

ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com