ಬೆಂಗಳೂರು: ಪ್ಯಾಲೆಸ್ತೀನ್ ಪರ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲು

ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ಯಾಲೆಸ್ತೀನ್'ಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ನಡೆದ ಪ್ರತಿಭಟನೆ.
ಪ್ಯಾಲೆಸ್ತೀನ್'ಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ನಡೆದ ಪ್ರತಿಭಟನೆ.

ಬೆಂಗಳೂರು: ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ನಡೆಸುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದಿಲ್ಲ. ಅನುಮತಿ ಪಡೆಯದೇ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರತಿಭಟನಾಕಾರರ ವಿರುದ್ಧ ಎಫ್‍ಐಆರ್ ದಾಖಲಿಸಿ, ತನಿಖೆಗೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಪ್ಯಾಲೆಸ್ತೀನ್ ಮೇಲೆ ನಡೆಸುತ್ತಿರುವ ಇಸ್ರೇಲ್ ದಾಳಿಯನ್ನು ಭಾರತ ಖಂಡಿಸಬೇಕೆಂದು ವಿರೋಧಿಸಿ ಫೆಲೆಸ್ತೀನ್ ಪರವಾಗಿ ಪ್ರತಿಭಟನೆ ನಡೆಸಿ ಘೊಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 25 ಜನರನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com