ನಾಳೆ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ಕುರಿತು ಚರ್ಚೆ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಭೆಯಲ್ಲಿ ಚಳಿಗಾಲ ಅಧಿವೇಶನ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದು, ಸಭೆಯಲ್ಲಿ ಚಳಿಗಾಲ ಅಧಿವೇಶನ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ಕೂಡಲೇ ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ.

ಡಿಸೆಂಬರ್ 15 ರ ನಂತರ ಶೂನ್ಯ ಮಾಸ ಕಾರಣ ಈ ದಿನಗಳಲ್ಲಿ ಅಧಿವೇಶನ ನಡೆಸಲು ಸರ್ಕಾರ ಮುಂದಾಗುವುದಿಲ್ಲ. ಹೀಗಾಗಿ ಡಿಸೆಂಬರ್ 4 ರಿಂದ 10 ದಿನಗಳ ಅಧಿವೇಶನ ನಡೆಸಲು ಚಿಂತನೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇನ್ನು ನವೆಂಬರ್ ನಲ್ಲಿ ಅಧಿವೇಶನ ಕುರಿತ ಪ್ರಶ್ನೆಗೆ ಉತ್ತರಿಸಿರುವ ಮೂಲಗಳು, ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು ನವೆಂಬರ್ ನಲ್ಲಿ 10 ದಿನಗಳು ಸಿಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಿದೆ.

ನಾಳೆ ನಡೆಯುವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ. ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಲೋಸಕಭಾ ಚುನಾವಣೆಯ ಸಿದ್ಧತೆಗಳ ಕುರಿತಂತೆಯೂ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ನಿಗಮ ಮಂಡಳಿ ನೇಮಕಾತಿ ನಡೆಸುವಲ್ಲಿ ಸರ್ಕಾರ ಬಿಝಿಯಾಗಲಿದ್ದು, ನೇಮಕಾತಿ ಒತ್ತಡವನ್ನು ಎದರಿಸುವ ಸಾಧ್ಯತೆಗಳಿವೆ. ಏನೇ ಆದರೂ ಅಂತಿಮ ನಿರ್ಧಾರಗಳು ಕೇಂದ್ರದ ನಾಯಕತ್ವದ ಮೇಲಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com