ಮೈಸೂರಿನಲ್ಲಿ ಆಘಾತಕಾರಿ ಘಟನೆ: ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ

ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಮೈಸೂರು: ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪಿರಿಯಾಪಟ್ಟಣ ಸಮೀಪದ ಮಾಕೋಡು ಗ್ರಾಮದ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಆತನ ಪತ್ನಿ ಲಕ್ಷ್ಮಿಗೆ ಮೂವರು ಮಕ್ಕಳಿದ್ದಾರೆ. ಮೊದಲ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಮೂರನೇ ಮಗುವಿನ ಹೆರಿಗೆಯ ಸಮಯದಲ್ಲಿ ಲಕ್ಷ್ಮಿ ನಿಧನರಾಗಿದ್ದರು.

ಗಣೇಶ್ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ತಾಯಿ ಅಂಜನಮ್ಮ ಬಳಿ ಬಿಟ್ಟು ಮಗನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ. ನಂತರ, ಆತ ಹಳ್ಳಿಗೆ ಮರಳಿದ್ದ ಮತ್ತು ಅವರು ತಾಯಿಯೊಂದಿಗೆ ವಾಸಿಸುತ್ತಿದ್ದರು. ನಾಲ್ಕು ದಿನಗಳ ಹಿಂದೆ ತಾಯಿಯೊಂದಿಗೆ ಜಗಳವಾಡಿ ಒಂದೂವರೆ ವರ್ಷದ ಮಗನನ್ನು ಮನೆಯಿಂದ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಮಗುವನ್ನು ಕೆರೆಗೆ ಎಸೆದು ನಾಪತ್ತೆಯಾಗಿದ್ದ. ಗ್ರಾಮಸ್ಥರು ಕೆರೆಯಲ್ಲಿ ಮಗುವಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬೆಳವಣಿಗೆ ಬಗ್ಗೆ ತಿಳಿದ ನಂತರ, ಆರೋಪಿಯ ಅತ್ತೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನೇ ಮಗುವನ್ನು ಕೊಂದಿರಬಹುದು ಎಂದು ಶಂಕಿಸಿದ್ದಾರೆ.

ಬುಧವಾರ ಪೊಲೀಸರು ಗಣೇಶ್‌ನನ್ನು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗದ ಕಾರಣ ಕೆರೆಗೆ ಎಸೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com