100 ಗ್ರಾಮ ಕೋರ್ಟ್ ಸ್ಥಾಪನೆ; ಮತ್ತೆ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಅಸ್ತು

ವಾಹನಗಳ ಸಿಎನ್​ಜಿ ಹಾಗೂ ಗೃಹ ಬಳಕೆಯ ಪಿಎನ್​ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಹನಗಳ ಸಿಎನ್​ಜಿ ಹಾಗೂ ಗೃಹ ಬಳಕೆಯ ಪಿಎನ್​ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್ ಅವರು, ಸಿಟಿ ಗ್ಯಾಸ್ ​​​​ಡಿಸ್ಟ್ರಿಬ್ಯೂಷನ್ ನೆಟ್​​ವರ್ಕ್ ​ಪಾಲಿಸಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ರಾಜ್ಯದ 195 ತಾಲೂಕುಗಳು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದೆವು. ಇದೀಗ ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

100 ಗ್ರಾಮ ನ್ಯಾಯಾಲಯ ಸ್ಥಾಪನೆಗೂ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. 100 ಗ್ರಾಮ ಕೋರ್ಟ್‌ ಸ್ಥಾಪನೆಗೆ ಅಂದಾಜು 25 ರಿಂದ 30 ಕೋಟಿ ಆಗಬಹುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ವೈದ್ಯಕೀಯ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೂ ಅನುಮೋದನೆ ನೀಡಲಾಗಿದ್ದು, ಕಡ್ಡಾಯ ಗ್ರಾಮೀಣ ಸೇವೆಯನ್ನು ಬದಲಾವಣೆ ಮಾಡಿ, ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಸೇವೆಗೆ ಅನುಮತಿ ನೀಡಲಾಗುವುದು ಎಂದು ಎಚ್.ಕೆ.ಪಾಟಿೀಲ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com