COTPA ಉಲ್ಲಂಘನೆ: ಹಲವೆಡೆ ಬಿಬಿಎಂಪಿ ದಿಢೀರ್ ಪರಿಶೀಲನೆ, 13 ವಾಣಿಜ್ಯ ಕೇಂದ್ರಗಳು ಬಂದ್!

ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ನಗರದ 8 ವಲಯಗಳಲ್ಲಿನ 13 ವಾಣಿಜ್ಯ ಮಳಿಗೆಗಳನ್ನು ಬಿಬಿಎಂಪಿ ಬಂದ್ ಮಾಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ನಗರದ 8 ವಲಯಗಳಲ್ಲಿನ 13 ವಾಣಿಜ್ಯ ಕೇಂದ್ರಗಳನ್ನು ಬಿಬಿಎಂಪಿ ಬಂದ್ ಮಾಡಿಸಿದೆ.

ರೆಸ್ಟೋರೆಂಟ್‌, ಪಬ್‌ ಮತ್ತು ಕೆಫೆಗಳು ನಿಯಮಗಳನ್ನು ಉಲ್ಲಂಘಿಸುತ್ತಿರುವ ಕುರಿತು ಹಲವು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದಿಢೀರ್ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ವೇಳೆ ಹಲವರು ನಿಯಮ ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ 50 ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸುಮಾರು ರೂ.50,000 ದಂಡ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ ಅವರು ಹೇಳಿದ್ದಾರೆ.

ಇತ್ತೀಚೆಗೆ ಪೊಲೀಸರು ನೂರಾರು ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಿಯಮಗಳನ್ನು ಅನುಸರಿಸದ ಮತ್ತು ಧೂಮಪಾನ ನಿಷೇಧ ವಲಯ ಎಂಬ ಫಲಗಳನ್ನು ಹಾಕದ 5 ಸಂಸ್ಥೆಗಳನ್ನು ಬಂದ್ ಮಾಡಿಸಿದ್ದಾರೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪೊಲೀಸ್ ಆಯುಕ್ತ  ಬಿ.ದಯಾನಂದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವ ಕುರಿತು ಎಚ್ಚರಿಕೆ ನೀಡಿದ್ದರು. ಅಲ್ಲದೆ, ಧೂಮಪಾನದ ದುಷ್ಪರಿಣಾಮಗಳ ಕುರಿತು ಕೈಪಿಡಿ ಬಿಡುಗಡೆ ಮಾಡಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದರು.

ಪೊಲೀಸರು ನಗರದಾದ್ಯಂತ 1,000 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಎರಡು ವಾರಗಳಲ್ಲಿ 950 ಪ್ರಕರಣಗಳನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com