ಬೆಳಗಾವಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್​ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಡಿಡಿಪಿಐ ಕಚೇರಿಯಲ್ಲಿ ಲೋಕಾಯುಕ್ತ ದಾಳಿ
ಡಿಡಿಪಿಐ ಕಚೇರಿಯಲ್ಲಿ ಲೋಕಾಯುಕ್ತ ದಾಳಿ

ಬೆಳಗಾವಿ: ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್​ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಿತ್ತೂರು ತಾಲೂಕಿನ ತುರುಮುರಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಬಸವರಾಜ್​ ನಾಲತವಾಡ ಅವರು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಾಲೆ ಮುಖ್ಯಸ್ಥ ಅರ್ಜುನ ಕುರಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. 

ಇಂದು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಸವರಾಜ್​ ನಾಲತವಾಡ ಅವರನ್ನು ಲಂಚದ ಹಣದ ಸಹಿತ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com