ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.
ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ.

ಅಕ್ಟೋಬರ್ 20 ಮತ್ತು 26 ಮತ್ತು ನವೆಂಬರ್ 4, 9 ಮತ್ತು 12 ರಂದು ಬೆಳಿಗ್ಗೆ 7 ರಿಂದ ರಾತ್ರಿ 11 ರವರೆಗೆ ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ , ಡಾ ಬಿಆರ್ ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಟ್ಟಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ವಾಹನ ನಿಲುಗಡೆಗೆ ಅನುಕೂಲವಾಗುವಂತೆ ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ಕ್ಯಾಬ್​ನಲ್ಲಿ ಬರುವ ಪ್ರಯಾಣಿಕರಿಗೆ ಕಬ್ಬನ್ ರಸ್ತೆಯಲ್ಲಿ ಡ್ರಾಪ್ ಆಂಡ್ ಪಿಕಪ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. ಆಟೋದಲ್ಲಿ ಬರುವವರಿಗೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಳಿ ಡ್ರಾಪ್ ಆಂಡ್ ಪಿಕಪ್ ಪಾಯಿಂಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ಹೆಚ್ಚುವರಿ ಬಸ್ ವ್ಯವಸ್ಥೆ

  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್.ಎ.ಎಲ್ ರಸ್ತೆ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣಕ್ಕೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೂಡಿ ರಸ್ತೆ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣಕ್ಕೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರಕ್ಕೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಜಯದೇವ ಆಸ್ಪತ್ರೆಯಿಂದ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ವರೆಗೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಂಸಿಟಿಸಿ, ನಾಯಂಡನಹಳ್ಳಿ ಮಾರ್ಗವಾಗಿ ಕೆಂಗೇರಿಗೆ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಮ‌ೂಲಕ ಜನಪ್ರಿಯ ಟೌನ್ ಶಿಪ್
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಯಶವಂತಪುರ ಮಾರ್ಗವಾಗಿ ನೆಲಮಂಗಲ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಬ್ಬಾಳ ಮಾರ್ಗವಾಗಿ ಯಲಹಂಕಾ 5 ನೇ ಹಂತ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಾಗಾವರ ಮಾರ್ಗವಾಗಿ ಆರ್.ಕೆ ಹೆಗಡೆ ನಗರ ಯಲಹಂಕಾ
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಣ್ಣೂರು ರಸ್ತೆ ಮೂಲಕ ಬಾಗಲೂರು
  • ಚಿನ್ನಸ್ವಾಮಿ ಕ್ರೀಡಾಂಗಣದಿಂದ ಟಿನ್ ಫ್ಯಾಕ್ಟರಿ ಮಾರ್ಗವಾಗಿ ಹೊಸಕೋಟೆಗೆ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com