ನಕಲಿ ವೋಟರ್ ಐಡಿ ತಯಾರಿಕೆ ಆರೋಪ: ಸಚಿವ ಭೈರತಿ ಸುರೇಶ್ ಆಪ್ತ ಸೇರಿ ಮೂವರು ಸಿಸಿಬಿ ಪೊಲೀಸರ ವಶಕ್ಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೈರತಿ ಸುರೇಶ್ ಜೊತೆ ಮೌನೇಶ್
ಬೈರತಿ ಸುರೇಶ್ ಜೊತೆ ಮೌನೇಶ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ನಕಲಿ ವೋಟರ್ ಐಡಿ  ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೈರತಿ ಸುರೇಶ್  ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com