ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಎಫ್ಐಆರ್ ದಾಖಲು

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಹಿತಿ, ಚಿಂತಕ ಪ್ರೊ ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. 
ಪ್ರೊ ಭಗವಾನ್
ಪ್ರೊ ಭಗವಾನ್

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಹಿತಿ, ಚಿಂತಕ ಪ್ರೊ ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. 

ಬಂಧನಕ್ಕೆ ಒತ್ತಾಯ: ಪ್ರೊ.ಭಗವಾನ್ ಅವರನ್ನು ಬಂಧಿಸಬೇಕೆಂದು ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೆಲವು ಹಿಂಬಾಲಕರನ್ನು ಖುಷಿಯಾಗಿಡಲು ಈ ರೀತಿ ಹೇಳಿಕೆ ನೀಡಿದ್ದಾರೆ.

ಒಕ್ಕಲಿಗ ಸಮುದಾಯದ ವಿರುದ್ಧ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ. ಇದು ದೇಶದ ಸಹಬಾಳ್ವೆ ಒಗ್ಗಟ್ಟು‌ ಒಡೆಯುವ ಕೆಲಸ. ಅದಕ್ಕೆ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಸೆಕ್ಷನ್ 153 ಅಡಿ ಗಲಾಟೆಗೆ ಪ್ರಚೋದನಕಾರಿಯಾಗುವಂತಹ ಭಾಷಣ. 153A ಎರಡು ಸಮುದಾಯದ ನಡುವೆ ಗಲಾಟೆ ಉಂಟು ಮಾಡುವುದು, ದ್ವೇಷ ಹೆಚ್ಚಿಸುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com