

ಕೋಲಾರ: ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆ ನಡೆದಿದೆ.
ಮಿಣಸಂದ್ರ ಗ್ರಾಪಂ ಸದಸ್ಯ 40 ವರ್ಷದ ಅನಿಲ್ ಮೃತ ವ್ಯಕ್ತಿ. ಅನಿಲ್ ಕಾಂಗ್ರೆಸ್ ಬೆಂಬಲಿಗರು ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.