ಉಡುಪಿ: ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ನಾಪತ್ತೆ

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶೃತಿನ್ ಶೆಟ್ಟಿ ಅವರು ಗುರುವಾರದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶೃತಿನ್ ಶೆಟ್ಟಿ ಅವರು ಗುರುವಾರದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಕಾಪು ಮೂಲದ ಶೃತಿನ್ ಶೆಟ್ಟಿ(35) ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

ಗುರುವಾರ ರಾತ್ರಿಯಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

2008ರ ಬ್ಯಾಚ್‌ನ ಪೊಲೀಸ್ ಪೇದೆಯಾಗಿದ್ದ ಶೆಟ್ಟಿ ಅವರು, ಎರಡು ತಿಂಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆಗಿ ಬಡ್ತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com