ಶಕ್ತಿ ಯೋಜನೆ ಯಶಸ್ಸಿನ ನಂತರ 5600 ಹೊಸ ಬಸ್‌ ಖರೀದಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಯಿಂದ ಉತ್ತೇಜಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 5,600...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಯಿಂದ ಉತ್ತೇಜಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 5,600 ಬಸ್‌ಗಳನ್ನು ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊಸ ಬಸ್‌ಗಳನ್ನು ಖರೀದಿಸಲು ರಾಜ್ಯ ಬಜೆಟ್‌ನಲ್ಲಿ 500 ಕೋಟಿ ರೂ. ಒದಗಿಸಲಾಗಿದ್ದು, ಶೀಘ್ರವೇ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿದೆ.

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಹೆಚ್ಚುವರಿ ವೇಳಾಪಟ್ಟಿ ಮತ್ತು ಬಸ್‌ಗಳನ್ನು ಒದಗಿಸಬೇಕು ಎಂದು ಸಿಎಂ ಹೇಳಿದ್ದಾರೆ.

ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಡಿ ರಾಜ್ಯದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ ಬಸ್ ಗಳಲ್ಲಿ ಶೇಕಡಾ 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com