ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ, 1.3 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರು ಸಮೀಪದ ದೇರಳಕಟ್ಟೆಯಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಇಲ್ಲಿಗೆ ಸಮೀಪದ ದೇರಳಕಟ್ಟೆಯಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಅಬ್ದುಲ್ ಅಜೀಜ್ ಅಲಿಯಾಸ್ ಪೈಕರ್ ಅಜೀಜ್ (42) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಆತನ ಬಳಿಯಿದ್ದ 1.3 ಲಕ್ಷ ಮೌಲ್ಯದ 26 ಗ್ರಾಂ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ, ಆತನಿಂದ ಒಂದು ಕಾರು, ಎರಡು ಮೊಬೈಲ್ ಫೋನ್‌ ಮತ್ತು ಎರಡು ಡಿಜಿಟಲ್ ತೂಕದ ಯಂತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6.41 ಲಕ್ಷ ರೂ. ಆಗಿದೆ.

ಬಂಧಿತ ವ್ಯಕ್ತಿಯ ವಿರುದ್ಧ ಉಲ್ಲಾಳ, ಕಾವೂರು ಮತ್ತು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ(ಎನ್‌ಡಿಪಿಎಸ್) ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com