ಹಿಂದಿನ ಸರ್ಕಾರ ಮೈಸೂರಿನಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ, ಅವರ ಮನೆ ಹಾಳಾಗ. ನಮ್ಮ ಪಕ್ಷದ ಅವಧಿಯಲ್ಲಿ ಹೊರತುಪಡಿಸಿದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ಕಾಸಿನ ಅಭಿವೃದ್ಧಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಕಟ್ಟಡದ ದುರಸ್ಥಿ ಕಾರ್ಯವನ್ನು ಪರಿಶೀಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಕಟ್ಟಡದ ದುರಸ್ಥಿ ಕಾರ್ಯವನ್ನು ಪರಿಶೀಲಿಸಿದರು.
Updated on

ಮೈಸೂರು: ಹಿಂದಿನ ಬಿಜೆಪಿ ಸರ್ಕಾರ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ, ಅವರ ಮನೆ ಹಾಳಾಗ. ನಮ್ಮ ಪಕ್ಷದ ಅವಧಿಯಲ್ಲಿ ಹೊರತುಪಡಿಸಿದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ಕಾಸಿನ ಅಭಿವೃದ್ಧಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಮೈಸೂರಿನ ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಇಂದು ಭೇಟಿ ನೀಡಿ ಕಟ್ಟಡದ ದುರಸ್ತಿ ಕಾರ್ಯವನ್ನು ವೀಕ್ಷಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂಪಾಯಿಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

2,000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೆಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು. 

ಹಿಂದಿನ ಸರ್ಕಾರ ಮೈಸೂರಿನಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ: 51 ಕೋಟಿ ರೂಪಾಯಿಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂಪಾಯಿ ವೆಚ್ಚದಲ್ಲಿ ಆರ್ಟ್ಸ್‌ ಕಾಲೇಜು, 99 ಕೋಟಿ ರೂಪಾಯಿಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು. 

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಫೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com