ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಬ್ಇನ್‌ಸ್ಪೆಕ್ಟರ್ ಭಾನುವಾರ ಮುಂಜಾನೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ರಾಯಚೂರು ನಿವಾಸಿ ಜಾಕೀರ್ ಹುಸೇನ್ (58) ಎಂದು ಗುರುತಿಸಲಾಗಿದೆ.
ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಹುಸೇನ್ ಅವರನ್ನು ಎನ್‌ಎಂಪಿಎ ಮುಖ್ಯ ಗೇಟ್‌ನಲ್ಲಿ ರಾತ್ರಿ ಪಾಳಿಯಲ್ಲಿ ನಿಯೋಜಿಸಲಾಗಿತ್ತು. ಅವರು ತಮ್ಮ ಪಾಳಿ ಮುಗಿಸಿ ಬೆಳಗಿನ ಪಾಳಿಯವರಿಗೆ ಉಸ್ತುವಾರಿಯನ್ನು ಹಸ್ತಾಂತರಿಸಿದ್ದಾರೆ.
ಬೆಳಗ್ಗೆ 6.30ರ ಸುಮಾರಿಗೆ ಮುಖ್ಯ ಗೇಟ್ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Advertisement