ಕನಕಪುರ ಬೆಂಗಳೂರಿಗೆ ಸೇರುತ್ತದೆ; ಇಲ್ಲಿನ ಭೂಮಿಯನ್ನು ನಗರದ ಜನರಿಗೆ ಮಾರಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು.

ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು.

ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ, ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ಹಿಂದೂ ಧರ್ಮದಲ್ಲಿ ಸಾವಿರಾರು ದೇವರುಗಳನ್ನು ಪೂಜಿಸಿಕೊಂಡು ಬರುತ್ತಿರುವ ವಿಚಿತ್ರ ಆಚರಣೆ,‌ ನಂಬಿಕೆ ಮಾಡಿಕೊಂಡು ಬಂದಿದ್ದೇವೆ. ಬೇರೆಯವರೆಲ್ಲಾ ಒಂದೇ ದೇವರು ಪೂಜಿಸುತ್ತಾರೆ. ಭಕ್ತಿಗೆ ಯಾವುದೇ ದೇವರಿಲ್ಲ ಎಂದು ನುಡಿದರು.

ವೀರಭದ್ರ ಶಿವನ ಸ್ವರೂಪ, ದೇವರುಗಳನ್ನೇ ಕಾಪಾಡುವ ದೇವರು ಈತ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ನಾವು ನಡೆಯಬೇಕು ಎಂದು ತಿಳಿಸಿದರು.

ವೀರಭದ್ರ ದೇವಸ್ಥಾನ ಉಳಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಸಂಸದರಾದ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತನಾಡಿದರು, ಯೋಜನಾ ನಕ್ಷೆ ಬದಲಾಯಿಸಲು ಆಗಲಿಲ್ಲ. ಈಗ ಆ ದೇವರ ಅನುಗ್ರಹದಿಂದ ಹೊಸ ದೇವಸ್ಥಾನ ನಿರ್ಮಾಣವಾಗುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com