ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ  ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ  ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ.

ಘಟನೆಯಲ್ಲಿ ಬಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲ್ವೇ ರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ವಿವಿಧ ವಲಯಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.

ರೈಲು ನಿಧಾನಗತಿಯಲ್ಲಿ ಚಲಿಸುತ್ತಿದ್ದು, ಈ ವೇಳೆ ಬಾಲಕ ರೈಲು ಮತ್ತು ಪ್ಲಾಟ್ ಫಾರ್ಮ್ ನಡುವೆ ಸಿಲುಕಿಕೊಂಡಿದ್ದಾನೆ. ಇದನ್ನು ಕಂಡ ಆರ್‌ಪಿಎಫ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ರೈಲಿನ ಸರಪಳಿ ಎಳೆಯುವಂತೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ರೈಲು ನಿಲ್ಲುತ್ತಿದ್ದಂತೆಯೇ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಬಾಲಕ ತನ್ನ ಪೋಷಕರೊಂದಿಗೆ ರೈಲಿನ ಬಾಗಿಲಿನ ಬಳಿ ಬಂದು ತಿಂದಿದ್ದು, ಈ ವೇಳೆ ರೈಲಿನಿಂದ ಕೆಳಗೆ ಬಿದ್ದಿದ್ದಾನೆಂದು ತಿಳಿದುಬಂದಿದೆ. ಬಾಲಕನನ್ನು ರಕ್ಷಿಸುವಲ್ಲಿ ಆರ್ ಪಿಎಫ್ ಸಿಬ್ಬಂದಿ ಸುಲೋಚನಾ ಎಸ್ ಹಿರೇಮಠ ಪ್ರಮುಖ ಪಾತ್ರ ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com