ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 2.5 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಅಬುಧಾಬಿಯಿಂದ ಆಗಮಿಸಿದ ಇವೈ 238 ವಿಮಾನವನ್ನು ಪರಿಶೀಲಿಸಿದ್ದು, ವಿಮಾನದ ವಾಶ್‌ರೂಮ್‌ನಲ್ಲಿ ಕಪ್ಪು ಪೌಚ್‌ನಲ್ಲಿ ಸುತ್ತಿದ ಚಿನ್ನದ ಪೇಸ್ಟ್ ಅನ್ನು ಜಪ್ತಿ ಮಾಡಿದ್ದಾರೆ.

80,21,920 ರೂಪಾಯಿ ಮೌಲ್ಯದ 1331.66 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದೆ.

ಇನ್ನು ಅಕ್ಟೋಬರ್ 22 ರಂದು ಕೌಲಾಲಂಪುರ್, ದುಬೈ ಮತ್ತು ಕೊಲಂಬೊದಿಂದ ಬಂದ ನಾಲ್ವರು ಪ್ರಯಾಣಿಕರಿಂದ 1.76 ಕೋಟಿ ರೂಪಾಯಿ ಮೌಲ್ಯದ ಅಂದಾಜು ಮೂರು ಕೆಜಿ ಚಿನ್ನವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com