ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ಬಾಲಕಿಗೆ ಸುಟ್ಟಗಾಯ!

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿ ಸಿಂಚನಾಗೆ ಆ್ಯಸಿಡ್‌ ಸಿಡಿದು ಸುಟ್ಟಗಾಯಗಳಾಗಿವೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿ ಸಿಂಚನಾಗೆ ಆ್ಯಸಿಡ್‌ ಸಿಡಿದು ಸುಟ್ಟಗಾಯಗಳಾಗಿವೆ. ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬುಧವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜೋಡಿ ಚಿಕ್ಕನಹಳ್ಳಿಯ ಕೆಲವು ನಿವಾಸಿಗಳ ಪ್ರಕಾರ, ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳಿಗೆ ಸೂಚಿಸಿದ್ದರು. ಆದರೆ ಟಾಯ್ಲೆಟ್ ಒಂದನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದನ್ನು ಕಂಡು ರಂಗಸ್ವಾಮಿ ತಾವೇ ಕ್ಲೀನ್ ಮಾಡಲು ಆರಂಭಿಸಿ,  ಆ್ಯಸಿಡ್‌ ಕ್ಲೀನರ್ ಅನ್ನು ನೆಲದ ಮೇಲೆ ಎರಚಿದ್ದಾರೆ.

ಆ್ಯಸಿಡ್‌ ಚಿಮುಕಿಸುವಾಗ ಕೆಲವು ಹನಿಗಳು ಅಲ್ಲಿಯೇ ನಿಂತಿದ್ದ ಸಿಂಚನಾ ಅವರ ಬೆನ್ನಿನ ಮೇಲೆ ಬಿದ್ದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಆಕೆಯ ಬೆನ್ನಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು, ತಕ್ಷಣ ಜೋಡಿ ಚಿಕ್ಕನಹಳ್ಳಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಕೂಡಲೇ ಆಕೆಯ ಬೆನ್ನಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು, ತಕ್ಷಣ ಗ್ರಾಮಸ್ಥರು ಜೋಡಿ ಚಿಕ್ಕನಹಳ್ಳಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಚನಾ ಅವರನ್ನು ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಲಾಗಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಘಟನೆಗೆ ಮುಖ್ಯಶಿಕ್ಷಕರೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಇನ್ನು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದು,  ಘಟನೆಯ ಕುರಿತು ವರದಿ ಸಲ್ಲಿಸುವಂತೆ ಬ್ಲಾಕ್ ಶಿಕ್ಷಣಾಧಿಕಾರಿ ನಾಗಭೂಷಣ್ ಅವರಿಗೆ ಸೂಚಿಸಿದ್ದಾರೆ.

ಗ್ರಾಮಸ್ಥರು ಮುಖ್ಯೋಪಾಧ್ಯಾಯರ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಗಭೂಷಣ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೂಡಲೇ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿ ಶಾಲೆಯಿಂದ ವರ್ಗಾವಣೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com