ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ

ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧನಕ್ಕೊಳಪಡಿಸಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸರ್ಕಾರ ಒಪ್ಪಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧನಕ್ಕೊಳಪಡಿಸಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸರ್ಕಾರ ಒಪ್ಪಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಸುರೇಶ್ ಕುಮಾರ್ ಅವರು, ನಕಲಿ ಆಧಾರ್ ಕಾರ್ಡ್‌ಗಳನ್ನು ಮುದ್ರಿಸಿದ ಆರೋಪದ ಮೇಲೆ ಎಂಎಸ್‌ಎಲ್ ಟೆಕ್ನೋ ಸೊಲ್ಯೂಷನ್ಸ್ ಅನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. “ಈ ಹಗರಣದ ಹಿಂದಿರುವ ವ್ಯಕ್ತಿಗಳನ್ನು ಬಿಡಬಾರದು ಎಂದು ಆಗ್ರಹಿಸಿದ್ದಾರೆ.

ಜನನ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸದೆ ಆಧಾರ್ ಕಾರ್ಡ್ ನೀಡಲಾಗಿದೆ. ಇದು ನಕಲಿ ಮತದಾರರ ಜಾಲಕ್ಕೆ ಕಾರಣವಾಗಿರಬಹುದು. ಈ ಬಗ್ಗೆ ತನಿಖೆಯಾಗಬೇಕು. ಈ ಸಂಬಂಧ ಈಗಾಗಲೇ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಿದ್ದೇವೆ. ಹಗರಣದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗನನ್ನೂ ಬಂಧಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಸಚಿವರ ಕುರಿತು ಸಂಶಯಗಳು ಮೂಡತೊಡಿವೆ. ಸಚಿವರನ್ನೂ ವಿಚಾರಣೆಗೊಳಪಡಿಸಬೇಕಿದೆ ಎಂದು ಒತ್ತಾಯಿಸಿದರು.

ಎಂಎಸ್ಎಲ್ ಟೆಕ್ನೋ ಸೊಲ್ಯೂಷನ್ಸ್ ನಕಲಿ ಮತದಾರರ ಗುರುತಿನ ಚೀಟಿಗಳನ್ನು ತಯಾರಿಸುತ್ತಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಸಹಾಯ ಮಾಡುತ್ತಿದೆ ಎಂದು ಎಫ್ಐಆರ್ ಉಲ್ಲೇಖಿಸಲಾಗಿದೆ. ಇದು ರಾಷ್ಟ್ರೀಯ ಭದ್ರತೆಯ ಪ್ರಕರಣವಾಗಿದ್ದು, ಈ ಪ್ರಕರಣವನ್ನು ರಾಷ್ಟ್ರೀಯ ಏಜೆನ್ಸಿಯಿಂದ ತನಿಖೆ ನಡೆಸಬೇಕು ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮತ್ತು ವಕೀಲ ವಿವೇಕ್ ರೆಡ್ಡಿ ಮಾತನಾಡಿ, ಪುರಾವೆಗಳಿಲ್ಲದ ಜನರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಲಾಗಿದೆ.“ಈ ನಕಲಿ ಆಧಾರ್ ಕಾರ್ಡ್‌ಗಳ ಮೂಲಕ, ಯಾರು ಬೇಕಾದರೂ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಬಾಂಗ್ಲಾದೇಶದವರೂ ಈ ನಕಲಿ ಕಾರ್ಡ್‌ಗಳನ್ನು ಪಡೆದಿದ್ದಾರೆ. ಸ್ಥಳೀಯ ಜನರಿಗೆ, ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಿಸಿದ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಅವರಿಗೆ ನಿರ್ದೇಶಿಸುತ್ತಾರೆ. ಆದರೆ, ಇವರಿಂದ ಅಂತಹ ಯಾವುದೇ ದಾಖಲೆಗಳನ್ನು ಕೇಳಲಿಲ್ಲ. ಈ ಸಂಪೂರ್ಣ ಜಾಲವನ್ನು ಬಯಲಿಗೆಳೆಯಬೇಕಿದೆ ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com