ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ

ನವೆಂಬರ್ 4-6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಮಗಳೂರು: ನವೆಂಬರ್ 4-6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.

ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗಾಗಿ ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ ಎಂಜು ಅಧಿಕಾರಿಗಳು ಹೇಳಿದ್ದಾರೆ.

ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ, ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com