ಲಂಚ: ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ಆಯುಕ್ತೆ ಲೋಕಾಯುಕ್ತರ ಬಲೆಗೆ

25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ದಾಕ್ಷಾಯಿಣಿ ಚೌಶೆಟ್ಟಿ ಎಂಬವರು ತನಿಖಾಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಅಧಿಕಾರಿಯಾಗಿದ್ದಾರೆ.

ಬೆಳಗಾವಿಯ ಆಟೊ ನಗರದಲ್ಲಿರುವ ವಿಕಾಸ ಕಂಪೋಸಿಟ್ಸ್ ಕಂಪನಿಯಿಂದ ಪೂರೈಸಲಾದ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಸಿ ಫಾರ್ಮ್ ಸ್ಟೇಟ್ ಜಿಎಸ್‌ಟಿ ಸಲ್ಲಿಸಿದ ಬಳಿಕ, 41 ಸಾವಿರ ರೂ ಮರಳಿ ಪಡೆಯಲು ದಾಕ್ಷಾಯಣಿ ಚೌಶೆಟ್ಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಕಂಪನಿ ಮ್ಯಾನೇಜರ್ ವಿಕಾಸ್ ಕೋಕಣೆ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.

ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮಧ್ಯಾಹ್ನ ಬೆಳಗಾವಿಯ ಕಚೇರಿಯಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಆಯುಕ್ತೆಯನ್ನು ಬಂಧನಕ್ಕೊಳಪಡಿಸಿದರು.

ಲೋಕಾಯುಕ್ತ ಎಸ್ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ನಿರಂಜನ ಪಾಟೀಲ ನೇತೃತ್ವದಲ್ಲಿ ಈ ದಾಳಿ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com