ಬೆಂಗಳೂರು: 5.4 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ವಿದೇಶಿಗರು ಸೇರಿ 10 ಡ್ರಗ್ ಪೆಡ್ಲರ್‌ಗಳ ಬಂಧನ!

ಡ್ರಗ್ ಪೆಡ್ಲಿಂಗ್ ವಿರುದ್ಧದ ಕಾರ್ಯಾಚರಣೆಯಲ್ಲಿ, ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಕಳೆದ 15 ದಿನಗಳಲ್ಲಿ ಎಂಟು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಡ್ರಗ್ ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕಾರ್ಯಾಚರಣೆಯಲ್ಲಿ, ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಕಳೆದ 15 ದಿನಗಳಲ್ಲಿ ಎಂಟು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಸೋಲದೇವನಹಳ್ಳಿ, ಎಚ್‌ಎಸ್‌ಆರ್ ಲೇಔಟ್, ವೈಟ್‌ಫೀಲ್ಡ್, ಪರಪ್ಪನ ಅಗ್ರಹಾರ, ಕೆಆರ್ ಪುರಂ, ಕಾಡುಗೋಡಿ ಮತ್ತು ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಬಂಧಿತರ ವಿರುದ್ಧ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರೋಪಿಗಳಿಂದ 3.8 ಕೆಜಿ ಎಂಡಿಎಂಎ, 50 ಗ್ರಾಂ ಕೊಕೇನ್, 25 ಎಕ್ಸ್‌ಟಾಸಿ ಮಾತ್ರೆಗಳು, 50 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 5.1 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಡ್ರಗ್ಸ್ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಕಂಪನಿಗಳ ಉದ್ಯೋಗಿಗಳು, ಕೆಲವು ಕಾರ್ಮಿಕರು ಆರೋಪಿಗಳ ಬಳಿ ಡ್ರಗ್ಸ್ ಖರೀದಿ ಮಾಡುತ್ತಿದ್ದರು. ಆರೋಪಿಗಳು ಮತ್ತು ಗ್ರಾಹಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com