ಹಜ್ ಭವನದ ಸಭಾಂಗಣದಲ್ಲಿ ಬೆಂಕಿ ಅವಘಡ
ರಾಜ್ಯ
ಬೆಂಗಳೂರು ಹಜ್ ಭವನದ ಸಭಾಂಗಣದಲ್ಲಿ ಬೆಂಕಿ ಅವಘಡ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಾಜ್ಯ ಹಜ್ ಭವನದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಾಜ್ಯ ಹಜ್ ಭವನದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಹೆಗಡೆ ನಗರ ಸಮೀಪದ ತಿರುಮೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆಡಿಟೋರಿಯಂ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ. ದಟ್ಟ ಹೊಗೆಯನ್ನು ಗಮನಿಸಿದ ಅಲ್ಲಿನ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ವರದಿಯವರೆಗೂ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿ ಅವಘಢದಿಂದಾಗಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ತಿಳಿದುಬಂದಿದೆ. ಹಜ್ ಸಮಿತಿಯ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಸಂಭಾವ್ಯ ಅನಾಹುತ ತಪ್ಪಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ