ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದ ಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

ಹಿಂದಿನ ಸರ್ಕಾರದವರು ಸಮುದಾಯಕ್ಕೆ ಹೆಚ್ಚಿನ ಹಣ ಮೀಸಲಿಟ್ಟಿರಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

“ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ.

ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು. ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗ ಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ” ಎಂದು ತಿಳಿಸಿದರು.

ಇದೇ ವೇಳೆ ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು.

ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳು. ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com